ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಬಳಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಇದರಿಂದ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದ್ದು, ರಾತ್ರಿಯಿಡೀ ಮಣ್ಣು ತೆರವುಗೊಳಿಸುವ ಕಾರ್ಯ ನಡೆದಿದೆ.ಇನ್ನು ಮಾರನಹಳ್ಳಿ ಸಮೀಪ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರನ್ನು ಪೊಲೀಸರು ರಕ್ಷಣೆ ಮಾಡಿ ಬದಲಿ ವಾಹನದಲ್ಲಿ ಕಳುಹಿಸಿ ಕೊಟ್ಟಿದ್ದಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಪೊಲೀಸರು ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

