ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಇಡದೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ಪ್ರಾಂಶುಪಾಲ ಮಂಜುನಾಥ್ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಕಾಲೇಜು ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದೆ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಪ್ರಾಂಶುಪಾಲ ಮಂಜುನಾಥ್ ಅವರನ್ನು ಕಾಲೇಜಿನಿಂದ ವಜಾ ಮಾಡಬೇಕು ಎಂದು ಅವರ ವಿರುದ್ಧ ಘೋಷಣೆ ಕೂಗಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

