Breaking News

ಬಳ್ಳಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ – ಲಾರಿ ಡಿಕ್ಕಿ : ಇಬ್ಬರ ದುರ್ಮರಣ!

ಸಿರುಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ರಾತ್ರಿ 11:30ರ ಸುಮಾರಿಗೆ ನಡೆದ ಈ ದುರಂತದಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ.ಅಪಘಾತದ ಸ್ಥಳಕ್ಕೆ ಧಾವಿಸಿದ ಸಿರಿಗೇರಿ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಸ್ ಚಾಲಕನ ವಿರುದ್ಧ ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *