ಕಾಳಗಿ ಪಟ್ಟಣ ಪಂಚಾಯಿತಿಯ ಮೊದಲ ಸಾರ್ವತ್ರಿಕ ಚುನಾವಣೆ ಭಾನುವಾರ ಶಾಂತಿಯುತವಾಗಿ ಜರುಗಿತು.ಒಟ್ಟು 11 ವಾರ್ಡ್‌ಗಳ 8,455 ಮತದಾರರ ಪೈಕಿ 3,411 ಪುರುಷ ಹಾಗೂ 3,333 ಮಹಿಳೆ ಹೀಗೆ ಒಟ್ಟ 6,744 ಮತದಾರರು (ಶೇ.79.76) ಮತದಾನ ಮಾಡಿದ್ದಾರೆ’ ಎಂದು ಚುನಾವಣಾಧಿಕಾರಿ ಬಸಲಿಂಗಪ್ಪ ಡಿಗ್ಗಿ ತಿಳಿಸಿದ್ದಾರೆ.ಎಸ್‌ಪಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಎಸ್‌ಪಿ ಮಹೇಶ ಮೇಘಣ್ಣವರ್, ಸೇಡಂ ಉಪವಿಭಾಗಾಧಿಕಾರಿ ಪ್ರಭುರೆಡ್ಡಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ತಹಶೀಲ್ದಾರ್ ಪೃಥ್ವಿರಾಜ ಪಾಟೀಲ, ಚುನಾವಣಾಧಿಕಾರಿ ಬಸಲಿಂಗಪ್ಪ ಡಿಗ್ಗಿ, ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಂಕಜಾ ಎ. ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

