Breaking News

ಬೆಂಗಳೂರು: Hebbal Loop flyover ಉದ್ಘಾಟಿಸಿದ ಸಿಎಂ-ಡಿಸಿಎಂ, ಮೇಲ್ಸೇತುವೆಯಲ್ಲಿ ಬೈಕ್ ಓಡಿಸಿದ ಡಿಕೆಶಿ.

ಹೆಬ್ಬಾಳ ಮೇಲ್ಸೇತುವೆ ಟ್ರಾಫಿಕ್ ಸಮಸ್ಯೆಯನ್ನು ದೂರ ಮಾಡಲು ನೂತನ ಮೇಲ್ಸೇತುವೆ ನಿರ್ಮಾಣವಾಗಿದ್ದು ಕೊನೆಗೂ ಇಂದು ಲೋಕಾರ್ಪಣೆಗೊಂಡಿದೆ.ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹಸಿರು ನಿಶಾನೆ ತೋರಿದ್ದಾರೆ.ಕೆ ಆರ್ ಪುರಂನಿಂದ ಮೇಖ್ರಿ ಸರ್ಕಲ್ ಕಡೆ ಸಂಪರ್ಕಿಸುವ 700 ಮೀಟರ್ ಉದ್ದದ ಹೊಸ ಮೇಲ್ಸೇತುವೆಯನ್ನು 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.ಉದ್ಘಾಟನೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್​​ ಬೈಕ್ ಸವಾರಿ ಮಾಡಿದರು. ತಮ್ಮ ನೆಚ್ಚಿನ ಯೆಜ್ಡಿ ಬೈಕ್ ಹತ್ತಿ ಹೆಬ್ಬಾಳ ನೂತನ ಮೇಲ್ಸೇತುವೆ ಮೇಲೆ ಸವಾರಿ ಮಾಡಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡರು.ಈ ವೇಳೆ ಸಚಿವರಾದ ಭೈರತಿ ಸುರೇಶ್​, ಕೃಷ್ಣಭೈರೇಗೌಡ, ಶಾಸಕರಾದ ಎಸ್​.ಆರ್.ವಿಶ್ವನಾಥ್​, ಹ್ಯಾರಿಸ್​, ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಉಪಸ್ಥಿತರಿದ್ದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *