Breaking News

ಮಾರನಹಳ್ಳಿಯಿಂದ ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನ ನಡುವೆ ಗುಡ್ಡಕುಸೀತ!

ಮಾರನಹಳ್ಳಿಯಿಂದ ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನ ನಡುವೆ ಗುಡ್ಡಕುಸಿತದಿಂದ ಮಣ್ಣು ಹಾಗೂ ಮರಗಳು ರಸ್ತೆಯ ಬಿದ್ದಿದ್ದವು. ಹತ್ತಾರು ಲೋಡ್‌ನಷ್ಟು ಮಣ್ಣು ಬಿದ್ದಿದ್ದರಿಂದ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಉಪ ವಿಭಾಗಾಧಿಕಾರಿ ಎಚ್‌.ಡಿ. ರಾಜೇಶ್‌, ವಲಯ ಅರಣ್ಯ ಅಧಿಕಾರಿ ಎಚ್‌.ಆರ್. ಹೇಮಂತ್‌ಕುಮಾರ್, ಪೊಲೀಸ್ ಇನ್‌ಸ್ಪೆಕ್ಟರ್ ನಿರಂಜನ್‌, ಪಿಎಸ್‌ಐ ಪ್ರಸನ್ನಕುಮಾರ್, ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್ ಅನೀಸ್‌, ಸೇರಿದಂತೆ ಕಂದಾಯ, ಪೊಲೀಸ್, ಅರಣ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಶನಿವಾರ ಸಂಜೆ 6 ರಿಂದ ಭಾನುವಾರ ಮುಂಜಾನೆ 2.30ರವರೆಗೂ ಮಳೆಯಲ್ಲಿಯೇ ನಿಂತು ತೆರವು ಕಾರ್ಯಾಚರಣೆ ಮಾಡಿಸಿದರು.ಸಕಲೇಶಪುರ ತಾಲ್ಲೂಕಿನ ಮಠಸಾಗರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ಭಾನುವಾರ ಕಿರುಹಳ್ಳ ಉಕ್ಕಿ ಹರಿಯಿತ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *