Breaking News

ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್ ಬದಲಾಯಿಸಿ- ಬಿ.ವೈ. ವಿಜಯೇಂದ್ರ ಒತ್ತಾಯ

ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟನ್ನೂ ಕೂಡಲೇ ಬದಲಾಯಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ. ಅದಕ್ಕೆ ಶಾಶ್ವತ ಪರಿಹಾರ ನೀಡಿದೆ ವಿಳಂಬ ಮಾಡಿದ್ದರಿಂದ ನೀರಿನ ಒತ್ತಡ ಇತರ ಗೇಟ್‌ಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಎಲ್ಲ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಬೇಕಾದ ಪರಿಸ್ಥಿತಿ ಒದಗಿಬಂದಿದೆ ಎಂದರು.

ಕೊಪ್ಪಳ, ರಾಯಚೂರು, ಬಳ್ಳಾರಿ ಮೊದಲಾದ ಜಿಲ್ಲೆಗಳ ರೈತರು ಪ್ರತಿವರ್ಷ 2 ಬೆಳೆ ಬೆಳೆಯುತ್ತಿದ್ದರು. ಆದರೆ, ರಾಜ್ಯ ಸರ್ಕಾರ ಅಥವಾ ಸಂಬಂಧಿತ ಸಚಿವರು, ತುಂಗಭದ್ರಾ ಜಲಾಶಯ ನೀರಾವರಿ ಮಂಡಳಿಯಲ್ಲಿ ಚರ್ಚೆ ಮಾಡಿ, ಒತ್ತಡ ಹಾಕದ ಪರಿಣಾಮವಾಗಿ ಈ ಬಾರಿ ರೈತರು ಒಂದೇ ಬೆಳೆಗೆ ತೃಪ್ತಿ ಪಡುವ ಸಂದರ್ಭ ಬಂದಿದೆ ಎಂದು ಟೀಕಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *