ರಾಜ್ಯಾದ್ಯಂತ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಪಿಎಸ್ ಅಳವಡಿಕೆ ಹಾಗೂ ಸ್ಕ್ವಾಡ್ ತಂಡವನ್ನು ಬಿಗಿಗೊಳಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಪರಿಷತ್ನಲ್ಲಿ ತಿಳಿಸಿದರು.ಅಕ್ರಮ ಮರಳುಗಾರಿಕೆ ನಡೆಸುವವರ ಮೇಲೆ ದಿಢೀರ್ ದಾಳಿ ನಡೆಸಿದ ವೇಳೆ ಲಾರಿ, ಟ್ರ್ಯಾಕ್ಟರ್, ಎತ್ತಿನಗಾಡಿ ಮತ್ತಿತರ ವಾಹನಗಳನ್ನು ಬಿಟ್ಟು ಓಡಿಹೋಗುತ್ತಾರೆ. ಆದರೂ ಸಂಬಂಧಪಟ್ಟವರ ಮೇಲೆ ದೂರು ದಾಖಲಿಸಿ ಕಾನೂನು ಪ್ರಕಾರವೇ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.ಅಕ್ರಮ ಮರಳುಗಾರಿಕೆ ತಡೆಗಟ್ಟಲು ಜಿಲ್ಲಾಧಿಕಾರಿಗಳು, ತಹಸೀಲ್ದಾರ್ ಸೇರಿದಂತೆ ಮತ್ತಿತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗದಂತೆ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

