Breaking News

ಕೊಡಗಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ!

ಚಾಲಕನ ನಿಯಂತ್ರಣ ತಪ್ಪಿದ ಕೆ‌.ಎಸ್.ಆರ್.ಟಿ.ಸಿ ಬಸ್ಸು ರಸ್ತೆ ಪಕ್ಕದ ದಿಬ್ಬಕ್ಕೆ ಗುದ್ದಿದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಮುಟ್ಲು ಗ್ರಾಮದಲ್ಲಿ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬಿ ಮಾರ್ಗವಾಗಿ ಮಡಿಕೇರಿಗೆ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಮುಟ್ಲು ಗ್ರಾಮದ ಸುಬ್ರಮಣ್ಯ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಸಮೀಪ ದಿಬ್ಬಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಸಣ್ಣ ಗಾಯಗಳಾಗಿದೆ. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರತಿದಿನ ಬಸ್ ನಲ್ಲಿ ನೂರಾರು ಮಂದಿ ಪ್ರಯಾಣಿಸುತ್ತಿದ್ದರು. ಆದ್ರೆ ಇಂದು ಶಾಲೆಗಳಿಗೆ ರಜೆ ಇದ್ದ ಹಿನ್ನಲೆ ಹೆಚ್ಚಿನ ವಿದ್ಯಾರ್ಥಿಗಳು ಅಥವಾ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಭಾರಿ ಅನಾಹುತ ತಪ್ಪಿದಂತಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *