Breaking News

ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ಹಣ ಪೀಕಿದ ವೃದ್ಧ!

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಓರ್ವ ವೃದ್ಧ ಜನರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾನೆ. ನಿವೃತ್ತ ಲೋಕೋ ಪೈಲಟ್​ ಶಿವಕುಮಾರ್ (71 ವರ್ಷ) ವಂಚಿಸಿದ ಆರೋಪಿ.ಆರೋಪಿ ಶಿವಕುಮಾರ ರಾಮನಗರದ ಸಾವಿತ್ರಮ್ಮ ಎಂಬುವರ ಬಳಿ 8.65 ಲಕ್ಷ ನಗದು, 3 ಲಕ್ಷ ಮೌಲ್ಯದ 59 ಗ್ರಾಮ ಚಿನ್ನಭರಣ ಪಡೆದಿದ್ದಾನೆ. ಬಳಿಕ, ಶಿವಣ್ಣ ಎಂಬುವರಿಂದ 4 ಲಕ್ಷ 50 ಸಾವಿರ ರೂ. ಹಣ ಪಡೆದಿದ್ದಾನೆ. ನಂತರ, ಇವರಿಗೆಲ್ಲ ರೈಲ್ವೆ ಇಲಾಖೆಯ ನಕಲಿ ಸೀಲ್ ಹಾಗೂ ಸೈನ್ ಮಾಡಿ office person department southwest railway, keshavapura post, gadag road, hubli-23 ಯಿಂದ ಪೋಸ್ಟ್ ಮಾಡಿದ್ದಾನೆ.ಕೇವಲ ರಾಮನಗರ ಜಿಲ್ಲೆ ಮಾತ್ರವಲ್ಲದೇ ಬೇರೆ ಜಿಲ್ಲೆಗಳಲ್ಲೂ ಆರೋಪಿ ಶಿವಕುಮಾರ್ ತನ್ನ ಕರಾಮತ್ತನ್ನು ತೋರಿಸಿದ್ದಾನೆ ಎನ್ನಲಾಗಿದೆ. ಒಟ್ಟಾರೆಯಾಗಿ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಗೆ ದೋಖಾ ಮಾಡಿದ್ದು, ಪೊಲೀಸರ ತನಿಖೆಯಿಂದ ಮತ್ತಷ್ಟು ಸತ್ಯಾಸತ್ಯತೆ ಹೊರಬರಬೇಕಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *