Breaking News

ರೈಲ್ವೆ ಹಳಿ ಮಧ್ಯ ಸೌರವಿದ್ಯುತ್ ಉತ್ಪಾದನೆ! ದೇಶದಲ್ಲೇ ಮೊದಲ ಐತಿಹಾಸಿಕ ಹೆಜ್ಜೆ!

ಭಾರತೀಯ ರೈಲ್ವೆ ಮಟ್ಟಿಗೆ ಇದೊಂದು ಐತಿಹಾಸಿಕ ಹಾಗೂ ಮೊದಲ ಬಾರಿಗೆ ನಡೆಸುತ್ತಿರುವ ಪ್ರಯತ್ನವಾಗಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಭಾರತೀಯ ರೈಲ್ವೆಯ ಉತ್ಪಾದನಾ ಘಟಕವಾದ ‘ಬನಾರಸ್ ಲೋಕೋಮೋಟಿವ್ ವರ್ಕ್ಸ್’ ರೈಲ್ವೆ ಹಳಿಯಿಂದಲೇ ವಿದ್ಯುತ್ ಉತ್ಪಾದಿಸುವ ಪ್ರಯತ್ನಕ್ಕೆ ಮುಂದಾಗಿದೆ. ಇಂತಹ ಪ್ರಯತ್ನ ದೇಶದಲ್ಲೇ ಮೊದಲು ಎನ್ನಬಹುದು. ನೀರು, ಪವನ ಮೂಲಕ ಉತ್ಪಾದಿಸುವ ವಿದ್ಯುತ್ ಅನ್ನು ರೈಲು ಚಲನೆಗೆ ಬಳಸಲಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ರೈಲ್ವೆ ಟ್ರ್ಯಾಕ್ ಮೇಲಿನ ಸೋಲಾರ್ ಪ್ಲೇಟ್‌ಗಳಿಂದ ವಿದ್ಯುತ್‌ ಉತ್ಪಾದಿಸಿ ಅದನ್ನು ರೈಲು ಸೇವೆ ಬಳಸಿಕೊಳ್ಳುವ ಉಪಕ್ರಮ ಇದಾಗಿದೆ.ಈ ಹೊಸ ಪ್ರಯತ್ನವು ರೈಲ್ವೆ ಸೇವೆಯನ್ನು ಪರಿಸರ ಸ್ನೇಹಿ ಹಾಗೂ ಸುಸ್ಥಿರ ರೈಲು ಸಾರಿಗೆಯತ್ತ ಪ್ರಮುಖ ಹೆಜ್ಜೆಯಾಗಿದೆ. ಇದು ಆರಂಭಿಕ ಹಂತದ ಪ್ರಯತ್ನವಾಗಿದೆ. ಸಾಧಕ ಬಾದಕ ನೋಡಿಕೊಂಡು ಮುಂದಿನ ದಿನಗಳಲ್ಲಿ ಸೋಲಾರ ಪ್ಯಾನಲ್ ಅಳವಡಿಕೆ ಮಾಡುವ ನಿರೀಕ್ಷೆ ಇದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *