ಟಿಪ್ಪರ್ ಲಾರಿಗೆ ಹಿಂದಿನಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ಬಸ್ ಡಿಕ್ಕಿ ಹೊಡೆದ ಪರಿಣಾಮ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ತೀವ್ರ ಗಾಯಗೊಂಡ ಘಟನೆ ಸಮೀಪದ ಹಾರುವನಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಮಂಗಳವಾರ ರಾತ್ರಿ ನೆಡೆದಿದೆ.ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಭಟಪನಹಳ್ಳಿ ಗ್ರಾಮದ ನಿರ್ವಾಹಕ ಉಮೇಶ್ ಮರಿಯಪ್ಪ ಹಾದಿಮನಿ (41) ಮೃತರು. ಅದೇ ತಾಲ್ಲೂಕಿನ ಅಡೂರು ಗ್ರಾಮದ ಚಾಲಕ ಮಬೂಸಾಬ್ ತೀವ್ರವಾಗಿ ಗಾಯಗೊಂಡಿದ್ದು, ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

