Breaking News

ರೈಲಿನಲ್ಲಿ ನಾಪತ್ತೆಯಾಗಿದ್ದ ಹೈಕೋರ್ಟ್ ತರಬೇತಿ ವಕೀಲೆ ನೇಪಾಳ ಗಡಿಯಲ್ಲಿ ಪತ್ತೆ!

ಅರ್ಚನಾ ತಿವಾರಿ ಎಂಬ ತರಬೇತಿ ವಕೀಲೆ ರಕ್ಷಾ ಬಂಧನ ಹಬ್ಬಕ್ಕಾಗಿ ಆಗಸ್ಟ್ ೭ರಂದು ರಾತ್ರಿ ಇಂದೋರ್ ನ ಕಟ್ನೆಗೆ ರೈಲಿನಲ್ಲಿ ಹೊರಟಿದ್ದರು.ರಕ್ಷಾ ಬಂಧನ ಹಬ್ಬಕ್ಕಾಗಿ ಕಟ್ನಾಗೆ ನರ್ಮಾದಾ ಎಕ್ಸ್ ಪ್ರೆಸ್ ರೈಲಿನಲ್ಲಿ ಹೊರಟಿದ್ದ ಅರ್ಚನಾ ಕೊನೆಯದಗಿ ಇಟಾರ್ಸಿ ರೈಲು ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ರೈಲ್ವೆ ಪೊಲೀಸರು ತೀವ್ರ ಹುಡುಕಾಟದ ಬಳಿಕ ಇದೀಗ ಅರ್ಚನಾರನ್ನು ನೇಪಾಳ ಗಡಿಯಲ್ಲಿ ಪತ್ತೆ ಮಾಡಿದ್ದಾರೆ.ಸದ್ಯ ಅವರನ್ನು ಭೋಪಾಲ್ ಗೆ ಕರೆತರಲಾಗುತ್ತಿದ್ದು, ಅವರಿಂದ ಹೇಳಿಕೆ ದಾಖಲಿಸಿಕೊಂಡ ಬಳಿಕವೇ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ರೈಲ್ವೆ ಎಸ್ ಪಿ ರಾಹುಲ್ ಕುಮಾರ್ ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *