Breaking News

10 ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಕೊಂದ ಜೂನಿಯರ್!!

ಶಾಲೆಯಲ್ಲಿ ಮೆಟ್ಟಿಲುಗಳನ್ನು ಇಳಿಯುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಇನ್ನೊಬ್ಬನಿಗೆ ಮೊಣಕೈಯಿಂದ ಹೊಡೆದಿದ್ದಾನಂತೆ. ಆ ಬಳಿಕ ಈ ಇಬ್ಬರು ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಈ ಗಲಾಟೆಯು ವಿಕೋಪಕ್ಕೆ ತಿರುಗಿದ್ದು, ಅವರಲ್ಲಿ ಒಬ್ಬನಿಗೆ ಇನ್ನೊಬ್ಬ ವಿದ್ಯಾರ್ಥಿ ಚಾಕುವಿನಿಂದ ಇರಿದಿದ್ದಾನೆ.ಇತ್ತ ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ವಿದ್ಯಾರ್ಥಿಯ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಆತನ ಕುಟುಂಬದ ಸದಸ್ಯರು ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ತಮ್ಮ ಪ್ರತಿಭಟನೆಗಳ ನಡುವೆ ಗದ್ದಲವನ್ನು ಸೃಷ್ಟಿಸಿದರು. ಅಲ್ಲದೇ ಮೊದಲೇ ಆಕ್ರೋಶಗೊಂಡಿದ್ದ ಪ್ರತಿಭಟನಾ ನಿರತ ಕುಟುಂಬ ಸದಸ್ಯರು ಶಾಲೆಯ ಸಿಬ್ಬಂದಿ, ಪ್ರಾಂಶುಪಾಲರು ಮತ್ತು ಇತರ ಸಿಬ್ಬಂದಿಯ ಮೇಲೂ ಹಲ್ಲೆ ನಡೆಸಿದ್ದಾರೆ.ಮೃತ ವಿದ್ಯಾರ್ಥಿ ಸಿಂಧಿ ಸಮುದಾಯದವನಾಗಿದ್ದು, ಪ್ರಮುಖ ಆರೋಪಿ ಮುಸ್ಲಿಂ ಸಮುದಾಯದವನು ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *