Breaking News

ಒಳಮೀಸಲಾತಿ ವಿರುದ್ಧ ಬಂಜಾರ, ಭೋವಿ,ಕೊರಚ, ಕೊರಮ ಸಮುದಾಯಗಳಿಂದ ತಲೆ ಬೋಳಿಸಿ ಆಕ್ರೋಶ!

ರಾಜ್ಯ ಸರ್ಕಾರ ಒಳಮೀಸಲಾತಿಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳನ್ನು ಒಳಗೊಂಡ ವಿಜಯನಗರ ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬುಧವಾರ ಇಲ್ಲಿ ಪ್ರತಿಭಟನೆ ನಡೆಯಿತು.ಟಿ.ಬಿ.ಡ್ಯಾಂ ರಸ್ತೆಯು ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದ ಬಳಿಯಿಂದ ಆರಂಭವಾದ ಕೈಯಲ್ಲಿ ಪೊರಕೆ ಹಿಡಿದ, ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪುನೀತ್ ರಾಜ್‌ಕುಮಾರ್ ವೃತ್ತಕ್ಕೆ ಬಂತು.ವರದಿಯನ್ನು ಏಕಪಕ್ಷೀಯವಾಗಿ ಅಂಗೀಕರಿಸಬಾರದು ಎಂದು ಒಕ್ಕೊರಲ ಒತ್ತಾಯ ಮಾಡಲಾಯಿತು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *