ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೆಎಂ ದೊಡ್ಡಿಯಲ್ಲಿ ನಡೆದಿದೆ. ಪ್ರಕರಣದಲ್ಲಿ ರಮೇಶ್, ಮಂಜು, ಕೋಲಾರ ಮೂಲದ ಅನಿಲ್ ರನ್ನು ಪೊಲೀಸರು ಬಂಧಿಸಿದ್ದರು. ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದರು.ಬೆಳಗ್ಗೆ ಪೊಲೀಸ್ ಠಾಣೆಯ ಶೌಚಾಲಯಕ್ಕೆ ಹೋಗಿ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಮೇಶ್ ಸಂಬಂಧಿಕರು ಲಾಕಪ್ ಡೆತ್ ಆರೋಪ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

