ಜಿಲ್ಲಾ ಮತ್ತು ತಾಲ್ಲೂಕು ತಂಬಾಕು ಕೋಶದ ವತಿಯಿಂದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ನೇತೃತ್ವದಲ್ಲಿ ಪಟ್ಟಣದಲ್ಲಿ ಬುಧವಾರ ತಂಬಾಕು ಉತ್ಪನ್ನಗಳ ಮಾರಾಟ ನಡೆಸುತ್ತಿದ್ದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ₹ 2,890 ದಂಡ ವಿಧಿಸಲಾಯಿತು. ತಂಬಾಕು ನಿಯಂತ್ರಣ ಕಾಯ್ದೆಯ ಉಲ್ಲಂಘನೆಗೆ ಮುಂದೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಯಿತು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ, ಪರಮೇಶ್, ಜಿಲ್ಲಾ ತಂಬಾಕು ಕೋಶದ ಸಂಯೋಜಕಿ ಮಮತಾ, ಕುಮಾರ್, ಪೊಲೀಸ್ ಸಿಬ್ಬಂದಿ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

