Breaking News

ಚಿತ್ರದುರ್ಗ: ವಿದ್ಯಾರ್ಥಿನಿ ಹತ್ಯೆ!! ಆರೋಪಿಗಳ ಫೋಟೋ ಹಿಡಿದು ಪ್ರತಿಭಟನೆ.

19 ವರ್ಷದ ವಿದ್ಯಾರ್ಥಿನಿ ವರ್ಷಿತಾ ಕೊಲೆ ಪ್ರಕರಣ ಭಾರಿ ಸಂಚಲನ ಉಂಟುಮಾಡಿದ್ದು, ವಿದ್ಯಾರ್ಥಿ ಸಮುದಾಯ ಕಳಕಳಿ ವ್ಯಕ್ತಪಡಿಸಿದೆ.ವಿದ್ಯಾರ್ಥಿನಿಯ ದಾರುಣ ಹತ್ಯೆಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ, ಚಿತ್ರದುರ್ಗದಲ್ಲಿ ಎಬಿವಿಪಿ ನೇತೃತ್ವದಲ್ಲಿ ಭಾರೀ ಪ್ರತಿಭಟನಾ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳು ಕೈಯಲ್ಲಿ ಪ್ಲೇಕಾರ್ಡ್ ಹಿಡಿದು, ಘೋಷಣೆಗಳನ್ನು ಕೂಗುತ್ತಾ ನಗರ ಮುಖ್ಯರಸ್ತೆಗಳಲ್ಲಿ ಪಂಜಿನ ಮೆರವಣಿಗೆ ನಡೆಸಿದರು.ಆರೋಪಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ವಿದ್ಯಾರ್ಥಿನಿ ವರ್ಷಿತಾ ಅವರ ಕೊಲೆ ಪ್ರಕರಣ ರಾಜ್ಯದಾದ್ಯಂತ ಆಕ್ರೋಶ ಮೂಡಿಸಿದೆ. ಜನರು ಹಾಗೂ ವಿವಿಧ ಸಂಘಟನೆಗಳು ಸರ್ಕಾರದಿಂದ ತ್ವರಿತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದು, ನ್ಯಾಯ ದೊರಕಬೇಕು ಎಂಬ ಒತ್ತಾಯ ಹೆಚ್ಚಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *