Breaking News

ಚಿತ್ರದುರ್ಗ: ಕೊಲೆಯಾದ ವಿದ್ಯಾರ್ಥಿನಿ 8 ತಿಂಗಳ ಗರ್ಭಿಣಿ! ಇನ್‌ಸ್ಟಾಗ್ರಾಂ ಪ್ರೀತಿ.

ಗೋನೂರು ಬಳಿ ಕೊಲೆಯಾದ ಪದವಿ ವಿದ್ಯಾರ್ಥಿನಿ ವರ್ಷಿತಾ 8 ತಿಂಗಳ ಗರ್ಭಿಣಿಯಾಗಿದ್ದರು. ವಿವಾಹ ಮಾಡಿಕೊಳ್ಳುವಂತೆ ಒತ್ತಾಯ ಮಾಡಿದ್ದ ಕಾರಣ ಆರೋಪಿ ಚೇತನ್‌ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ್ದ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು ತಿಳಿಸಿದರು.ಮರಣೋತ್ತರ ಪರೀಕ್ಷೆಯ ವೇಳೆ 8 ತಿಂಗಳ ಭ್ರೂಣ ಪತ್ತೆಯಾಗಿದೆ. ವರದಿ ಇನ್ನೂ ಬರಬೇಕಿದೆ. ಕಳೆದ 10 ತಿಂಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ವಿಚಾರ ಬಂದಾಗ ಆರೋಪಿ ಕೊಲೆ ಮಾಡುವ ಸಂಚು ರೂಪಿಸಿದ್ದ’ ಎಂದು ತಿಳಿದಿದೆ.ಆರೋಪಿಯನ್ನು ಪತ್ತೆ ಹೆಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ’ ಎಂದು ಮಾಹಿತಿ ನೀಡಿದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *