ಮಹಿಳೆಯೊಬ್ಬಳು ಲವರ್ ಗಾಗಿ ಸ್ವಂತ ಅತ್ತೆಯನ್ನೇ ಮುದ್ದೆಯಲ್ಲಿ ವಿಷ ಹಾಕಿ ಕೊಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದ ತಡಗ ಗ್ರಾಮದಲ್ಲಿ ನಡೆದಿದೆ.ಪ್ರಿಯಕರನಿಗಾಗಿ ಅಶ್ವಿನಿ ಮನೆಯಲ್ಲಿ ಚಿನ್ನಾಭರಣ ಹಾಗೂ ಕಳುವು ಮಾಡುತ್ತಿದ್ದಳು. ಕದ್ದ ಹಣ ಹಾಗೂ ಚಿನ್ನಾಭರಣವನ್ನು ಪ್ರಿಯಕರ ಆಂಜನೇಯನಿಗೆ ಕೊಡುತ್ತಿದ್ದಳು.
ಈ ವಿಷಯ ಗೊತ್ತಾದ ಬಳಿಕ ಅತ್ತೆಯನ್ನೇ ಸೊಸೆ ಅಶ್ವಿನಿ ವಿಷ ಹಾಕಿ ಕೊಂದಿದ್ದಾಳೆ. ಬಳಿಕ ಮನೆಯವರಿಗೆ ದೇವಿರಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ನಂಬಿಸಿದ್ದಳು. ಮನೆಯಲ್ಲಿ 100 ಗ್ರಾಂ ಚಿನ್ನ ಹಾಗೂ 50 ಸಾವಿರ ಹಣ ಕಳುವಾಗಿದ್ದರಿಂದ ಅಶ್ವಿನಿ ನಾದಿನಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಕಳ್ಳತನದ ಪ್ರಕರಣದ ತನಿಖೆ ನಡೆಸಿದಾಗ ಹತ್ಯೆಯ ಹಿಂದಿನ ರಹಸ್ಯ ಬಯಲಾಗಿದೆ. ಪೊಲೀಸರು ವಿಚಾರಣೆ ನಡೆಸಿದಾಗ ತಾನೇ ಅತ್ತೆಯನ್ನ ಕೊಂದಿರುವುದಾಗಿ ಅಶ್ವಿನಿ ತಪ್ಪೊಪ್ಪಿಕೊಂಡಿದ್ದಾಳೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

