Breaking News

ರೀಲ್ಸ್‌ ಮಾಡಲು ಹೋಗಿ ಜಲಪಾತದಲ್ಲಿ ಕೊಚ್ಚಿಕೊಂಡು ಹೋದ ಯೂಟ್ಯೂಬರ್‌!

ಒಡಿಶಾದ ಕೊರಾಪುಟ್ ಜಿಲ್ಲೆಯ ದುಡುಮಾ ಜಲಪಾತದಲ್ಲಿ ಈ ಘಟನೆ ನಡೆದಿದ್ದು, ರೀಲ್‌ಗಳನ್ನು ಚಿತ್ರೀಕರಿಸುವಾಗ ಯೂಟ್ಯೂಬರ್‌ ಒಬ್ಬ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.ನೀರಿನಲ್ಲಿ ನಾಪತ್ತೆಯಾಗಿರುವ ಯೂಟ್ಯೂಬರ್‌ನನ್ನು ಗಂಜಾಂ ಜಿಲ್ಲೆಯ ಬೆರ್ಹಾಂಪುರದ 22 ವರ್ಷದ ಸಾಗರ್ ತುಡು ಎಂದು ಗುರುತಿಸಲಾಗಿದೆ.ಸಾಗರ್ ಡ್ರೋನ್ ಕ್ಯಾಮೆರಾ ಬಳಸಿ ಜಲಪಾತದಲ್ಲಿ ರೀಲ್‌ಗಳನ್ನು ರೆಕಾರ್ಡ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಯೂಟ್ಯೂಬ್ ಚಾನೆಲ್‌ಗಾಗಿ ವಿವಿಧ ಪ್ರವಾಸಿ ಸ್ಥಳಗಳ ವಿಡಿಯೋಗಳನ್ನು ರೆಕಾರ್ಡ್ ಮಾಡಲು ತಮ್ಮ ಸ್ನೇಹಿತ ಅಭಿಜಿತ್ ಬೆಹೆರಾ ಅವರೊಂದಿಗೆ ಕೊರಾಪುಟ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *