Breaking News

ಪತಿ ಕೊಂದಿದ್ದಕ್ಕೆ ಪತ್ನಿ, ಪ್ರೇಮಿಗೆ ಮರಣದಂಡನೆ!

ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಕೊಲೆ ಮಾಡಿರೋದು ಸಾಬೀತಾಗಿದೆ. ಪತ್ನಿ ಹಾಗೂ ಪ್ರಿಯಕರನಿಗೆ ಮರಣ ದಂಡನೆ ವಿಧಿಸಿ, ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.ಇಮ್ತಿಯಾಜ್‌ ಹಾಗೂ ಲಕ್ಷ್ಮೀ ಪ್ರೀತಿಸಿ ಮದುವೆಯಾಗಿದ್ರು. ಬಳಿಕ ಬಾಲ್ಯ ಸ್ನೇಹಿತ ಕೃಷ್ಣಮೂರ್ತಿ ಜೊತೆ ಲಕ್ಷ್ಮೀ ಅನೈತಿಕ ಸಂಬಂಧ ಬೆಳೆಸಿದ್ಲು. ಇದಕ್ಕೆ ವಿರೋಧಿಸಿದ್ದ ಇಮ್ತಿಯಾಜ್‌ನನ್ನ, ಜನ್ನಾಪುರದ ಮನೆಯಲ್ಲಿ ಕೊಲೆ ಮಾಡಿದ್ರು. ತಲೆಗೆ ರಾಡ್‌, ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ರು. ಬಳಿಕ ಮೃತದೇಹವನ್ನ ನೈಲಾನ್‌ ದಾರದಲ್ಲಿ ಕಟ್ಟಿ ಭದ್ರಾವತಿಯ ಹೊಸ ಸೇತುವೆ ಸಮೀಪ, ಭದ್ರಾ ನದಿಯಲ್ಲಿ ಎಸೆಯಲಾಗಿತ್ತು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *