Breaking News

ಜೇವರ್ಗಿ | ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು; ಸೇತುವೆ, ಬೆಳೆಗಳು ಜಲಾವೃತ .

ಮಳೆಯಿಂದ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹೊಲ-ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.ತಗ್ಗು ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.ದಿನ ಬಳಕೆಯ ವಸ್ತುಗಳು ಸೇರಿದಂತೆ ವಿವಿಧ ಸಾಮಗ್ರಿಗಳು ನೀರು ಪಾಲಾಗಿವೆ. ಮನೆಯವರೆಲ್ಲರೂ ಬೆಳಗಾಗುವವರೆಗೂ ನಿದ್ದೆಗೆಟ್ಟು ನೀರು ಹೊರಹಾಕಲು ಪರದಾಡಿದ್ದಾರೆ. ಮಕ್ಕಳು, ವೃದ್ಧರು ಅಕ್ಕಪಕ್ಕದ ಮನೆಗಳಲ್ಲಿ ರಾತ್ರಿ ಕಳೆದಿದ್ದಾರೆ.

ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಹಳ್ಳ ತುಂಬಿ ಹರಿಯುತ್ತಿದ್ದು, ಪಕ್ಕದ ಜೋಪಡಪಟ್ಟಿ ಬಡಾವಣೆ, ಷಣ್ಮುಖ ಶಿವಯೋಗಿಗಳ ವಿರಕ್ತ ಮಠದ ಆವರಣ, ಷಣ್ಮುಖ ಶಿವಯೋಗಿ ಪ್ರೌಢ ಶಾಲೆ, ಬುಗ್ಗಿ ಬಡಾವಣೆ, ಜೇವರ್ಗಿ-ಕೆ ಬಡಾವಣೆ, ಮೌನೇಶ್ವರ ಕಾಲೊನಿ ಬಡಾವಣೆಯ ಮನೆಗಳಲ್ಲಿ ನೀರು ನುಗ್ಗಿ ಸಾಕಷ್ಟು ಸಂಭವಿಸಿದೆ

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *