ಹಾಸನದಲ್ಲಿ ಕುಳಿತುಕೊಂಡು ದಾವಣಗೆರೆಯ ಶಾಲಾ ಶಿಕ್ಷಕಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ 22.40 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪದಲ್ಲಿ ದಾವಣಗೆರೆ ಸೆನ್ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತನ ಬ್ಯಾಂಕ್ ಖಾತೆಯಲ್ಲಿದ್ದ 1.90 ಲಕ್ಷ ಹಣ ಫ್ರೀಜ್ ಮಾಡಿದ್ದು, ಇನ್ನೂ ಇಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಫೆಬ್ರವರಿ 5ರಂದು ಶಿಕ್ಷಕಿಗೆ ಕರೆ ಮಾಡಿದ್ದ ವಂಚಕರು ತಮ್ಮ ಹೆಸರಿನಲ್ಲಿ ದುಬೈಗೆ ಕಳಿಸುತ್ತಿರುವ ಕೋರಿಯರ್‌ನಲ್ಲಿ ಮಾದಕ ದ್ರವ್ಯ ಪತ್ತೆಯಾಗಿದೆ.ನಕಲಿ ಕರೆ, ಮೆಸೇಜ್, ಒಟಿಪಿಗೆ ಬೇಡಿಕೆ, ಹಣಕ್ಕೆ ಬೇಡಿಕೆ ಇಟ್ಟರೆ ತಕ್ಷಣವೇ ಸೈಬರ್ ಅಪರಾಧ ವಿಭಾಗಕ್ಕೆ ದೂರು ನೀಡಿ. ಅನಗತ್ಯವಾಗಿ ಯಾವುದೇ ಲಿಂಕ್ ಕ್ಲಿಕ್ ಮಾಡಬೇಡಿ. ಬ್ಯಾಂಕ್ ಹೆಸರಿನಲ್ಲಿ, ಸಾಲದ ಹೆಸರಿನಲ್ಲಿ ಅಥವಾ ನಿಮ್ಮ ಮೇಲೆ ಪ್ರಕರಣ ದಾಖಲಾಗಿದೆ ಎಂಬ ನೆಪದಲ್ಲಿ ಮಾಹಿತಿ ಪಡೆದು ವಂಚಿಸುವ ಸಾಧ್ಯತೆಗಳು ಹೆಚ್ಚು.
bigtvnews | Hubli Dharwad News | Kannada News | Karnataka News Hubli News | News In Hubli | Local news

