ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್’ಗಾಗಿ ಬ್ರಹ್ಮಾವರ ತಾಲ್ಲೂಕಿನ ಆರೂರು ಗ್ರಾಮದ ಮುಂಡ್ಕಿನಜಡ್ಡುವಿನ ದೀಕ್ಷಾ ವಿ. ಅವರು ಆ. 21 ರಿಂದ ಆರಂಭಿಸಿರುವ 216 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನವು ಗುರುವಾರ ಸಂಜೆ 5.30ಕ್ಕೆ 170 ಗಂಟೆಗಳನ್ನು ದಾಟಿತು.ಈ ಮೂಲಕ ಅವರು ಮಂಗಳೂರಿನ ರೆಮೊನಾ ಇವೆಟ್ ಪಿರೇರಾ ಅವರ ಈ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.ಮಣಿಪಾಲದ ರತ್ನ ಸಂಜೀವ ಕಲಾಮಂಡಲವು ದೀಕ್ಷಾ ಅವರಿಗೆ ಬೆನ್ನೆಲುಬಾಗಿ ನಿಂತಿದೆ. ದೀಕ್ಷಾ ಅವರ ನೃತ್ಯ ಗುರು ವಿದ್ವಾನ್ ಶ್ರೀಧರ ರಾವ್, ತಂದೆ ವಿಠಲ್ ಪೂಜಾರಿ, ತಾಯಿ ಶುಭ, ಪತಿ ರಾಹುಲ್, ಮಾಜಿ ಶಾಸಕ ರಘುಪತಿ ಭಟ್, ಉದ್ಯಮಿ ಜಿ. ಶಂಕರ್, ಮಹೇಶ್ ಠಾಕೂರ್ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

