Breaking News

ಉಳ್ಳಾಲ: ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ SSI ಮಂತ್ರಾ 3.0 ಪ್ರಾರಂಭ.

ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯು ‘ಎಸ್‌ಎಸ್‌ಐ ಮಂತ್ರಾ 3.0 ರೊಬೊಟಿಕ್‌ ಸರ್ಜಿಕಲ್ ಸಿಸ್ಟಮ್’ ಪರಿಚಯಿಸಿದೆ.ಭಾರತದಲ್ಲೇ ತಯಾರಿಸಲಾದ ಈ ತಂತ್ರಜ್ಞಾನವು, ಗಂಭೀರ ಶಸ್ತ್ರಚಿಕಿತ್ಸೆಗಳಲ್ಲಿ ಜಾಗತಿಕ ಮಟ್ಟದ ಸಾಮರ್ಥ್ಯ ಹೊಂದಿದೆ ಎಂದು ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ವಿಜಯಕುಮಾರ್ ಹೇಳಿದರು.ವೈದ್ಯಕೀಯ ಅಧೀಕ್ಷಕ ಡಾ.ಹಬೀಬ್ ರಹಮಾನ್ ಎ.ಎ., ಯುರಾಲಜಿ ವಿಭಾಗದ ಮುಖ್ಯಸ್ಥ ಡಾ.ಮುಜೀಬ್ ರೆಹಮಾನ್, ಶಸ್ತ್ರಚಿಕಿತ್ಸಾ ಆಂಕಾಲಜಿ ಮುಖ್ಯಸ್ಥ ಡಾ.ಜಲಾಲುದ್ದೀನ್ ಅಕ್ಬರ್ ಸಮಗ್ರ ಮಾಹಿತಿ ನೀಡಿದರು. ಎಸ್‌ಎಸ್‌ ಇನೊವೇಷನ್ಸ್‌ ಇಂಟರ್ನ್ಯಾಷನಲ್ ಸಂಸ್ಥೆ ಅಧ್ಯಕ್ಷ ಡಾ.ಸುಧೀರ್ ಶ್ರೀವಾಸ್ತವ ಶಸ್ತ್ರಚಿಕಿತ್ಸಾ ತಂಡವನ್ನು ಮುನ್ನಡೆಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *