ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವನ್ಯಜೀವಿಯ ವಲಯ ವ್ಯಾಪ್ತಿಯ ವಡಕೆಹಳ್ಳ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಮೃತಪಟ್ಟಿದೆ. ಕೊಳ್ಳೇಗಾಲ ವನ್ಯಜೀವಿ ವಲಯ ಅರೆಪಾಳ್ಯ ಶಾಖೆಯ ಉಪವಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗಸ್ತು ಮಾಡುತ್ತಿರುವಾಗ ಆನೆ ಮೃತಪಟ್ಟಿರುವುದು ಕಂಡು ಬಂದಿದೆ.ಮೃತ ಆನೆಗೆ ಅಂದಾಜು 25 ವರ್ಷ ಇದ್ದು, ಎರಡು ದಂತಗಳನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆದುಕೊಂಡಿದೆ.ಮೇಲ್ನೋಟಕ್ಕೆ ಆನೆಯು ಸಹಜವಾಗಿ ಮೃತಪಟ್ಟಿದ್ದು, ವರದಿ ಬಂದ ನಂತರ ಆನೆಯ ಸಾವಿಗೆ ಸ್ಪಷ್ಟ ಕಾರಣ ತಿಳಿದು ಬರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

