Breaking News

ರಾಜ್ಯದಲ್ಲಿ ಹಂದಿ ಜ್ವರ ಪತ್ತೆ; ಫಾರ್ಮ್‌ನಲ್ಲಿ ಬೆಳೆಸಿದ 57 ಹಂದಿಗಳನ್ನು ಕೊಲ್ಲಲು ಆದೇಶ!

ಚಿಂತಾಮಣಿ ತಾಲೂಕಿನ ಹೆಬ್ರಿ ಗ್ರಾಮದ ಹಂದಿ ಫಾರ್ಮ್‌ವೊಂದರಲ್ಲಿ ಮಾರಕ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ಕಳೆದ ಕೆಲವು ದಿನಗಳಲ್ಲಿ ಸುಮಾರು 50 ಹಂದಿಗಳು ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಉಳಿದ 57 ಹಂದಿಗಳನ್ನು ಕಲ್ಲಿಂಗ್ ಮಾಡಲು ಪಶುಸಂಗೋಪನಾ ಇಲಾಖೆ ನಿರ್ಧರಿಸಿದೆ.ಆಫ್ರಿಕನ್ ಹಂದಿ ಜ್ವರವು ಒಂದು ಪ್ರಾಣಿಯಿಂದ ಇನ್ನೊಂದು ಪ್ರಾಣಿಗೆ ಮಾತ್ರ ಹರಡುವ ರೋಗವಾಗಿದೆ. ಇದು ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ. ಈ ಘಟನೆಯ ನಂತರ, ಸುತ್ತಮುತ್ತಲಿನ ಪ್ರದೇಶಗಳ ಹಂದಿ ಫಾರ್ಮ್‌ಗಳ ಮೇಲೆ ಇಲಾಖೆಯು ನಿಗಾ ಇರಿಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *