ಮಂಗಳೂರಿನ ಡಿಪೋದ ಕೆಎಸ್‌ಆರ್‌ಟಿಸಿ ಬಸ್ ತಲಪಾಡಿ ಬಸ್ ನಿಲ್ದಾಣದಲ್ಲಿ ಆಟೋಗೆ ಗುದ್ದಿ 5 ಜನರ ಸಾವಿಗೆ ಕಾರಣವಾಗಿದೆ. ಇದೀಗ ಮಾಧ್ಯಮಗಳಿಗೆ ಸಿಕ್ಕಿರುವ ಸಿಸಿಟಿವಿ ಕ್ಯಾಮೆರಾದ ವಿಡಿಯೋ ದೃಶ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಳಿಜಾರಿನಲ್ಲಿ ಹಿಂದಕ್ಕೆ ಬಂದು ನಿಂತಿದ್ದ ಹಿಂಬದಿಯಿಂದಲೇ ಜೋರಾಗಿ ಗುದ್ದಿರುವುದು ಕಾಣುತ್ತದೆ.ಕಾಸರಗೋಡು ಕಡೆಯಿಂದ ಬಂದ ಬಸ್ ಆಟೋದಲ್ಲಿದ್ದ 6 ಮಂದಿಯನ್ನೂ ಬಲಿ ಪಡೆದಿದೆ. ಸ್ಥಳದಲ್ಲಿ ಬಸ್ಸಿಗೆ ಕಾಯುತ್ತಿದ್ದ ಇಬ್ಬರು ಪ್ರಯಾಣಿಕರು ಕೂಡ ಗಂಭೀರ ಗಾಯಗೊಂಡಿದ್ದಾರೆ. ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಕೇಸು ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

