Breaking News

ಅಪ್ರಾಪ್ತ ಬಾಲಕಿಯೊಂದಿಗೆ ಹಸೆಮಣೆಯೇರಿ ಕಳ್ಳಾಟವಾಡಿದ ಪಂಚಾಯಿತಿ ಅಧ್ಯಕ್ಷನಿಗೆ ಬಂಧನ ಭೀತಿ.

ಅಪ್ರಾಪ್ತ ಬಾಲಕಿಯೊಂದಿಗೆ ಹಸೆಮಣೆಯೇರಿ, ಬಳಿಕ ಬಾಲಕಿಯ ನಕಲಿ ಪ್ರಮಾಣಪತ್ರವನ್ನು ಬಿಡುಗಡೆ ಮಾಡುವ ಮೂಲಕ ಕಳ್ಳಾಟವಾಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷನಿಗೆ ಈಗ ಬಂಧನ ಭೀತಿ ಎದುರಾಗಿದೆ. ಬಸ್ಸಾಪುರ ಗ್ರಾಮ ಪಂಚಯಿತಿ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. 2023ರ ನ.5 ರಂದು ಅಪ್ರಾಪ್ತೆ ಜೊತೆಗೆ ಭೀಮಶಿ ಕಾಲಿಮಣಿ ವಿವಾಹವಾಗಿದ್ದ ಎನ್ನಲಾಗಿದೆ.

ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಭೀಮಶಿ ಕಳ್ಳಾಟ ನಡೆಸುತ್ತಿದ್ದಾನೆ‌. ದೂರು ಬಂದ ತಕ್ಷಣವೇ ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಸಲ ಮಕ್ಕಳ ರಕ್ಷಣಾ ತಂಡ ಹೋಗಿದೆ. ಬಾಲಕಿ ಪತ್ತೆಹಚ್ಚಲು ಮಕ್ಕಳ ರಕ್ಷಣಾ ‌ತಂಡ ವಿಫಲವಾಗಿದೆ. ಈ ಮಧ್ಯೆಯೇ ಆಕೆ ಪ್ರಾಪ್ತ ವಯಸ್ಸಿನವಳು ಎಂಬ ದಾಖಲೆಯನ್ನು ಅಧ್ಯಕ್ಷ ಬಿಡುಗಡೆ ಮಾಡಿ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದ ಎನ್ನಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *