Breaking News

ನೀರಿನ ಸೆಳೆತಕ್ಕೆ ಸಿಲುಕಿ ವಿದ್ಯಾರ್ಥಿಯ ಸಾವು!

ಚೆರ್ಕಳ ಪಾಡಿಯಲ್ಲಿ ಆರನೇ ತರಗತಿ ವಿದ್ಯಾರ್ಥಿ ನೀರಿನ ಸೆಳೆತಕ್ಕೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಮುಟ್ಟತ್ತೋಡಿ ಗ್ರಾಮದ ಕಲ್ಲಕಟ್ಟ ಬೆಳ್ಳೂರಡ್ಕದ ಹಸೈನಾರ್‌ ಅವರ ಪುತ್ರ ಮಿಥ್‌ಲಾಜ್‌ (11) ಸಾವಿಗೀಡಾದ ಬಾಲಕ. ಸ್ನೇಹಿತರೊಂದಿಗೆ ಶನಿವಾರ ಸಂಜೆ ತೋಡಿನಲ್ಲಿ ಈಜಾಡಲು ಹೋಗಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿದ್ದು, ವಿದ್ಯಾನಗರ ಪೊಲೀಸ್‌, ಅಗ್ನಿಶಾಮಕ ದಳ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಯಿತು. ಮೃತದೇಹವನ್ನು ಕಾಸರಗೋಡು ಜನರಲ್‌ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *