ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದ ಬೆಂಗಳೂರಿನ ಮಹಿಳೆಯೊಬ್ಬರು ಇಲ್ಲಿನ ಸೌಪರ್ಣಿಕಾ ನದಿಗೆ ಬಿದ್ದು ಮೃತಪಟ್ಟಿದ್ದಾರೆ. ಅವರನ್ನು ಬೆಂಗಳೂರು ತ್ಯಾಗರಾಜನಗರ ನಿವಾಸಿ ಸಿ.ಆರ್.ಗೋವಿಂದರಾಜು-ವಿಮಲಾ ಎಂಬುವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ.ವಸುಧಾ ಚಕ್ರವರ್ತಿ ಅವರಿಗೆ ಚೆನ್ನಾಗಿ ಈಜು ಬರುತ್ತಿದ್ದು, ಅವರು ಈಜುವುದಕ್ಕೆಂದು ನದಿಗೆ ಇಳಿದು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿರಬಹುದೇ ಅಥವಾ ಅವರು ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬುದು ಖಚಿತವಾಗಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

