Breaking News

ನಾಗವಲ್ಲಿ ಹಾಡಿಗೆ ಡ್ಯಾನ್ಸ್: ಹೃದಯಾಘಾತದಿಂದ ವ್ಯಕ್ತಿ ಸಾವು.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಕೂಡ ನಿನ್ನೆ ರಾತ್ರಿ ಘಟನೆ ನಡೆದಿದೆ. ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಗೆ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ (40) ಮೃತ ವ್ಯಕ್ತಿ.ಗಣೇಶ ವಿಸರ್ಜನೆ ಹಿನ್ನಲೆ ಗ್ರಾಮಸ್ಥರು ಡ್ಯಾನ್ಸ್​​ ಮಾಡುತ್ತಿದ್ದರು. ಲಕ್ಷ್ಮಿಪತಿ ಕೂಡ ಡ್ಯಾನ್ಸ್ ಮಾಡುತ್ತಿದ್ದು, ಹಠಾತ್ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ ಗ್ರಾಮದಲ್ಲಿ ಕೃಷಿ ಮಾಡಿಕೊಂಡು ಜೀವನ‌ ನಡೆಸುತ್ತಿದ್ದರು. ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *