Breaking News

ಸ್ವಂತ ಅಣ್ಣನಿಂದಲೇ ತಂಗಿ ಮೇಲೆ ಅತ್ಯಾಚಾರ – ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಶಿವಮೊಗ್ಗದಲ್ಲಿ 15 ವರ್ಷದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಾಲಕಿಯ ಸಹೋದರನಿಂದಲೇ ನಿರಂತರ ಅತ್ಯಾಚಾರದಿಂದ ಬಾಲಕಿ ಗರ್ಭಿಣಿಯಾಗಿ ಇದೀಗ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವರದಿಯಾಗಿದೆಬಾಲಕಿಯ ಪೋಷಕರು ದೂರು ನೀಡಿರುವ ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 15 ವರ್ಷದ ಬಾಲಕಿಯು ಗರ್ಭ ಧರಿಸಲು ಆಕೆಯ 16 ವರ್ಷದ ಅಣ್ಣನೇ ಕಾರಣ ಎಂದು ಪೋಷಕರು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ. ಬಾಲಕಿಯು 9ನೇ ತರಗತಿ‌ ಓದಿದ್ದು, ಶಾಲೆ ಬಿಟ್ಟು ಮನೆಯಲ್ಲಿಯೇ ಇರುತ್ತಿದ್ದಳು. ಪೋಷಕರು ಕೆಲಸಕ್ಕೆ ಹೋದಾಗ ಸಹೋದರ ದುಷ್ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಪೋಷಕರಿಗೆ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *