Breaking News

ಡ್ರೋನ್ ಮೂಲಕ ಪಾಕಿಸ್ತಾನದಿಂದ ಮಾದಕವಸ್ತುಗಳ ಸಾಗಾಟ; ನಾಲ್ವರ ಬಂಧನ.

ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ಮಾದಕವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರಿಂದ ಪಾಕಿಸ್ತಾನ ನಿರ್ಮಿತ ಪಿಸ್ತೂಲ್ ಮತ್ತು 80 ಜೀವಂತ ಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.ದೇಶದ ಹಲವು ರಾಜ್ಯಗಳ ಮಾದಕವಸ್ತು ಮಾರಾಟಗಾರರಿಗೆ ಇವುಗಳನ್ನು ಸರಬರಾಜು ಮಾಡಲಾಗುತ್ತಿತ್ತು.ಪೊಲೀಸರಿಗೆ ಮಾಹಿತಿ ಸಿಕ್ಕಿದ ನಂತರ, ಪಂಜಾಬ ನಿವಾಸಿಯಾದ ರೂಪಿಂದರ್ ಸಿಂಗ್ ನನ್ನು ಬಂಧಿಸಲಾಯಿತು. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಅವನಿಂದ ಹೆರಾಯಿನ್, ಅಫೀಮು, ಪಾಕಿಸ್ತಾನ ನಿರ್ಮಿತ ಪಿಸ್ತೂಲ್ ಮತ್ತು 80 ಜೀವಂತ ಗುಂಡುಗಳು ಸಿಕ್ಕಿವೆ.ಪೊಲೀಸ್ ಮಹಾನಿರೀಕ್ಷಕ ಅಮರೇಶ್‌ ಮಿಶ್ರಾ ಈ ಕುರಿತು ಮಾತನಾಡಿ, ಮುಖ್ಯ ಸೂತ್ರಧಾರ ರೂಪಿಂದರ್ ಸಿಂಗ್ ನ ತಾಯಿಯನ್ನು ಕೂಡ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಆಕೆಯ ಖಾತೆಯಿಂದ ಹಣದ ವ್ಯವಹಾರ ಮತ್ತು ಹೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *