ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರವಿವಾರದಂದು ವರದಿಯಾಗಿದೆ.ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24) ಎಂದು ಗುರುತಿಸಲಾಗಿದೆ.ಸುಮಾರು 1,15,110 ರೂ. ಮೌಲ್ಯ ದ ಮದ್ಯ ತಯಾರಿಕೆಯ ಮೂರು ಮೆಷಿನ್ ಗಳು, ಮಿಕ್ಸರ್ ಮೆಷಿನ್, ಅಕ್ರಮ ಮದ್ಯದ ಬಾಟ್ಲಿಗಳು, ಗೋವಾದಲ್ಲಿ ಮಾತ್ರ ಮಾರಾಟ ಮಾಡುವ ಪರವಾನಿಗೆ ಇರುವ 8 ಮನ್ಶನ್ ಹೌಝ್ ಎಂಬ ಹೆಸರಿನ ಮದ್ಯದ ಬಾಟ್ಲಿಗಳು, ಮದ್ಯ ತಯಾರಿಕೆಗೆ ಬೇಕಾದ ಇತರ ಸೊತ್ತುಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

