Breaking News

ಪ್ರವಾಹ ಪೀಡಿತ ಪ್ರದೇಶದಲ್ಲಿ ಮನೆ ಕುಸಿತ!!

ಪoಜಾಬ್, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ಕಡೆ ಮಳೆ ಈ ಬಾರಿ ಭಾರಿ ಅವಾಂತರವನ್ನು ಸೃಷ್ಟಿಸಿದೆ ಹಲವು ಕಡೆಗಳಲ್ಲಿ ಮನೆಗಳು ಕುಸಿದಿದ್ದರೆ, ರಸ್ತೆಗಳೂ ಕೊಚ್ಚಿ ಹೋಗಿದ್ದು, ಸಂಚಾರ ದುಸ್ತರವಾಗಿದೆ.ಪಂಜಾಬ್‌ನ ಫಿರೋಜ್‌ಪುರದಲ್ಲೂ ಪ್ರವಾಹ ಪೀಡಿತ ಪ್ರದೇಶದಲ್ಲಿ ಮನೆ ಕುಸಿತಗೊಂಡಿದ್ದು ಆದರೆ ಮನೆಯಲ್ಲಿ ಅಳವಡಿಸಿದ್ದ ಸೀಲಿಂಗ್ ಫ್ಯಾನೊಂದು ಕೆಳಗೆ ಬೀಳದೇ ಭದ್ರವಾಗಿ ನಿಂತಿದ್ದು, ಅದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗ್ತಿದೆ. ಪ್ರವಾಹ ಪೀಡಿತ ಗಟ್ಟಿ ರಾಜೊಕೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಇದರ ವೀಡಿಯೋ ವೈರಲ್ ಆಗಿದೆ. ವೀಡಿಯೋ ನೋಡಿದ ನೆಟ್ಟಿಗರು ವೈರಿಂಗ್ ಮಾಡಿದ ಇಲೆಕ್ಟ್ರೀಷಿಯನ್‌ಗೆ ಒಂದು ಪದಕ ನೀಡುವಂತೆ ಮನವಿ ಮಾಡಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *