Breaking News

ಸಾಹಿತಿ ಎಸ್.ಎಂ.ಹಿರೇಮಠ ಅವರಿಗೆ ‘ಶ್ರೀಚೆನ್ನರೇಣುಕ ಬಸವ’ ಪ್ರಶಸ್ತಿ .

ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಕಲಬುರಗಿಯ ಎಸ್.ಎಂ.ಹಿರೇಮಠ ಅವರು ಹಾರಕೂಡ ಹಿರೇಮಠ ಸಂಸ್ಥಾನದ ಪ್ರಸಕ್ತ ಸಾಲಿನ `ಶ್ರೀಚೆನ್ನರೇಣುಕ ಬಸವ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು ₹1 ಲಕ್ಷ ನಗದು, ಎರಡು ತೊಲೆ ಚಿನ್ನದ ಪದಕ ಮತ್ತು ಫಲಕ ಒಳಗೊಂಡಿದೆ.ಎಸ್.ಎಂ.ಹಿರೇಮಠ ಅವರು 300ಕ್ಕೂ ಅಧಿಕ ಗ್ರಂಥ ರಚಿಸಿದ್ದಾರೆ. ಇವರು ಸಾಹಿತ್ಯ, ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತಿದೆ’ ಎಂದು ಹಿರೇಮಠದ ಪೀಠಾಧಿಪತಿ ಚನ್ನವೀರ ಶಿವಾಚಾರ್ಯರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 1ರಂದು ಮಠದಲ್ಲಿ ಆಯೋಜಿಸುವ ಅನುಭಾವ ಪ್ರಚಾರ ಉಪನ್ಯಾಸ ಮಾಲೆ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *