Breaking News

ನೀಟ್ ಪರೀಕ್ಷೆ ಬರೆದು ಗಾರೆ ಕೆಲಸಕ್ಕೆ ಬಂದಿದ್ದವ ಪಾಸ್.

ಓಡಿಶಾದ ಖುರ್ದಾ ಜಿಲ್ಲೆಯ ಪುಟ್ಟ ಹಳ್ಳಿಯ ಹತ್ತೊಂಬತ್ತು ವರ್ಷದ ಹುಡುಗ ಶುಭಂ ಸಬರ್‌ ಹನ್ನೆರಡನೇ ತರಗತಿಯ ಪರೀಕ್ಷೆ ಮುಗಿಸಿ, ನೀಟ್‌ ಪರೀಕ್ಷೆಯನ್ನೂ ಬರೆದು ಬೆಂಗಳೂರಿಗೆ ಬಂದಿದ್ದ! ಪಾಪ ನೀಟ್‌ ಪರೀಕ್ಷೆಗೆ ಓದಿ ಮಗ ಸುಸ್ತಾಗಿದ್ದಾನೆ ಎಂದು ಅವರಪ್ಪ ಬೆಂಗಳೂರಿನ ಪ್ರವಾಸಕ್ಕೆ ಕಳಿಸಿದ್ದಲ್ಲ. ಪರಿಶಿಷ್ಟ ಪಂಗಡಕ್ಕೆ ಸೇರಿದ ಶುಭಂ ಅಷ್ಟೆಲ್ಲ ಅನುಕೂಲವಿದ್ದವನಲ್ಲ. ತಂದೆಯ ಹತ್ತಿರ ಇರುವುದು ಇಷ್ಟೇ ಇಷ್ಟು ಜಮೀನು. ಅದರಲ್ಲಿ ಮನೆಯವರ ಹೊಟ್ಟೆ ತುಂಬಿಸುವುದೇ ಕಷ್ಟ! ನಾಲ್ಕು ಮಕ್ಕಳಲ್ಲಿ ಇವನೇ ಹಿರಿಯ.ರಾಷ್ಟ್ರಮಟ್ಟದಲ್ಲಿ ಸರ್ಕಾರ ನಡೆಸುವ ನೀಟ್ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಗಳಿಸಿ ಡಾಕ್ಟರ್ ಆಗುವುದಕ್ಕೆ ಕಾಲೇಜೊಂದರಲ್ಲಿ ಸೀಟು ಸಿಕ್ಕಿರುತ್ತದೆ. ಈಗ ಗಾರೆ ಕೆಲಸ ಮಾಡುತ್ತಿರುವ ಹುಡುಗ ಇನ್ನೈದು ತಿಂಗಳಲ್ಲಿ ಸ್ಕೆತಾಸ್ಕೋಪ್ ಹಿಡಿಯುತ್ತಾನೆ. ಮುಂದಿನ 5 ವರ್ಷದಲ್ಲಿ ಡಾಕ್ಟರ್ ಆಗಿ ಚಿಕಿತ್ಸೆ ನೀಡಲಿದ್ದಾನೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *