ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜ್ ನಿಂದ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಸಂಬಂಧಿದಂತೆ ವಿಮಾನ ನಿಲ್ದಾಣದ ನಾಲ್ಕು ಮಂದಿ ಸಿಬ್ಬಂದಿಯನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಮಂಗಳೂರು ತಾಲೂಕು ಕಂದಾವರದ ನಿವಾಸಿ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ ಮತ್ತು ರಾಜೇಶ್ ಮತ್ತು ಬಜಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ.ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳಾ ಪ್ರಯಾಣಿಕರೊಬ್ಬರು ಅಗಸ್ಟ್ 30 ರಂದು ಆಗಮಿಸಿದ್ದರು. ಈ ವೇಳೆ ಮಂಗಳೂರು ವಿಮಾನ ನಿಲ್ದಾಣದ ಬ್ಯಾಗೆಜ್ ಬೇಲ್ಟ್ ನಿಂದ ತಮ್ಮ ಲಗೇಜ್ ನ್ನು ಪಡೆದು ಚೆಕ್ ಮಾಡಿದಾಗ ಸುಮಾರು 4.5 ಲಕ್ಷ ಮೌಲ್ಯದ 56 ಗ್ರಾಂ ತೂಕದ ಚಿನ್ನಾಭರಣ ಕಳವು ಆಗಿದ್ದು ಪತ್ತೆಯಾಗಿದೆ. ಈ ಬಗ್ಗೆ ಪ್ರಯಾಣಿಕರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

