Breaking News

ಮಂಗಳೂರು: ಕಾಲೇಜಿಗೆ ತೆರಳಿದ ಯುವತಿ ನಾಪತ್ತೆ!

ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬವರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದರು.ಸೆಪ್ಟೆಂಬರ್ 1 ರಂದು ಕಾಲೇಜು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗುವುದಾಗಿ ತಾಯಿಯಲ್ಲಿ ತಿಳಿಸಿ ಹೋದವರು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾಣೆಯಾದ ದಿನ ಬ್ಲೂ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಶರ್ಟ್ ಹಾಗೂ ಕಪ್ಪು ಬಣ್ಣದ ಕಾಲೇಜು ಸಮವಸ್ತ್ರ ಪ್ಯಾಂಟ್ ಧರಿಸಿದ್ದರು. ಕಾಣೆಯಾದವರ ಗುರುತು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *