ಮಂಡ್ಯದಲ್ಲಿ ವಿಚಿತ್ರ ಪ್ರಕರಣವೊಂದು ನಡೆದಿದ್ದು, ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲಾಕ್ ಮೇಲ್ ಮಾಡಿದ್ದಾನೆ. ವಾಟ್ಸಪ್ ಗ್ರೂಪ್ ಗೆ ಅಪ್ಪನ ಅಶ್ಲೀಲ ಸಂದೇಶ ಕಳಿಸಿ ತಂದೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಮಗನ ವಿರುದ್ದ ರೊಚ್ಚಿಗೆದ್ದ ತಂದೆಯಿಂದ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಬೆದರಿಕೆ ಹಾಕಿದ ಆರೋಪಿ ಮಗನನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ.ಪ್ರಣವ್ (25) ತಂದೆಗೆ ಬ್ಲಾಕ್ ಮೇಲ್ ಮಾಡಿದ ಕಿರಾತಕ ಮಗ ಎಂದು ತಿಳಿದುಬಂದಿದೆ.ದುಶ್ಚಟಗಳಿಗೆ ಬಲಿಯಾಗಿ ವಿರೋಧಿಗಳ ಜೊತೆ ಸೇರಿ ಆಸ್ತಿಗಾಗಿ ತಂದೆ ಜೊತೆ ಕಿರಿಕ್ ಮಾಡಿಕೊಂಡಿದ್ದಾನೆ. ಈಗಾಗಲೇ ತಂದೆಯ ಕೋಟ್ಯಾಂತರ ರೂ ಕಳೆದು ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

