Breaking News

ರೈತರಿಗೆ ಕೃಷಿ ಇಲಾಖೆಯಿಂದಲೇ ವಂಚನೆ! ಅವಧಿ ಮೀರಿದ ಕ್ರಿಮಿನಾಶಕ, ಗೊಬ್ಬರ ನೀಡುತ್ತಿರುವ ರೈತ ಸಂಪರ್ಕ ಕೇಂದ್ರಗಳು.

ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯ ಜೇವರ್ಗಿ ಹಾಗು ಯಡ್ರಾಮಿ ತಾಲೂಕಿನ ಕೆಲ ರೈತ ಸಂಪರ್ಕ ಕೇಂದ್ರಗಳು ಎರಡು ವರ್ಷದ ಹಿಂದೆಯೇ ಅವಧಿ ಮೀರಿದ್ದ ಕ್ರಿಮಿನಾಶಗಳನ್ನು ರೈತರಿಗೆ ಮಾರಾಟ ಮಾಡುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.ರೈತರಿಗೆ ವಂಚಿಸುತ್ತಿರುವ ರೈತ ಸಂಪರ್ಕ ಕೇಂದ್ರಗಳ ವಿರುದ್ದ ಹಾಗೂ ಅಲ್ಲಿನ ಸಿಬ್ಬಂದಿ ವಿರುದ್ದ ಶಿಸ್ತು ಕ್ರಮ ಆಗಬೇಕು ಮತ್ತು ಅವಧಿ ಮೀರಿದ ಕ್ರಿಮಿನಾಶಕಗಳನ್ನು ವಶಕ್ಕೆ ಪಡೆಯಬೇಕು. ರೈತರಿಗೆ ವಂಚಿಸಿದ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಸಿರು ಸೇನೆ ರೈತ ಸಂಘದ ಮುಖಂಡರು ಆಗ್ರಹಿಸಿದ್ದಾರೆ. ಅಲ್ಲದೇ, ಇಷ್ಟೆಲ್ಲಾ ನಡೆಯತ್ತಿದ್ದರೂ ಕೃಷಿ ಸಚಿವರು ಕಾಣೆಯಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *