Breaking News

ಕರ್ನಾಟಕ ಹೈಕೋರ್ಟ್‌ನ ಗೇಮಿಂಗ್‌ ಕೇಸು ಸುಪ್ರೀಂಗೆ ವರ್ಗಕ್ಕೆ ಕೇಂದ್ರ ಮನವಿ.

ಕರ್ನಾಟಕ ಸೇರಿದಂತೆ 3 ರಾಜ್ಯಗಳ ಹೈಕೋರ್ಟ್‌ಗಳಲ್ಲಿ ವಿಚಾರಣೆಗೆ ಬಂದಿರುವ ಆನ್‌ಲೈನ್‌ ಗೇಮಿಂಗ್‌ಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದೆ.ಹಣವನ್ನು ಬಳಸಿ ಆಡುವ ಆನ್‌ಲೈನ್‌ ಆಟಗಳಿಗೆ ಕಡಿವಾಣ ಹಾಕಲು ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆ 2025 ಅನ್ನು ಮೊದಲ ಬಾರಿ ಜಾರಿಗೆ ತರಲಾಗಿತ್ತು. ಇದನ್ನು ಕರ್ನಾಟಕ, ಮಧ್ಯಪ್ರದೇಶ ಮತ್ತು ದೆಹಲಿ ಹೈಕೋರ್ಟ್‌ಗಳನ್ನು ಪ್ರಶ್ನಿಸಲಾಗಿತ್ತು. ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಈ ಕುರಿತು ಮಧ್ಯಂತರ ಆದೇಶ ಹೊರಡಿಸಲೂ ನಿರ್ಧಾರವಾಗಿದೆ. ಹೀಗಿರುವಾಗ, 3 ಹೈಕೋರ್ಟ್‌ಗಳು ಭಿನ್ನ ತೀರ್ಪು ಕೊಟ್ಟರೆ ಉಂಟಾಗಬಹುದಾದ ಗೊಂದಲವನ್ನು ತಡೆಯುವ ಸಲುವಾಗಿ, ಎಲ್ಲಾ ಕೇಸ್‌ಗಳನ್ನು ಸುಪ್ರೀಂ ಅಂಗಳಕ್ಕೆ ತರಬೇಕೆಂದು ಕೇಂದ್ರ ಸರ್ಕಾರವು ಮುಖ್ಯ ನ್ಯಾ। ಬಿ.ಆರ್‌. ಗವಾಯಿ ಮತ್ತು ನ್ಯಾ। ಕೆ. ವಿನೋದ್‌ ಚಂದ್ರನ್‌ ಅವರ ಪೀಠದೆದುರು ಕೋರಿಕೊಂಡಿದೆ. ಇದರ ವಿಚಾರಣೆಯನ್ನು ಮುಂದಿನ ವಾರ ನಡೆಸಲು ಸಿಜೆಐ ಒಪ್ಪಿಗೆ ಸೂಚಿಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *