Breaking News

ಚೊಚ್ಚಲ ಪ್ರಯಾಣ ಆರಂಭಿಸಿದ ಕೆಲ ನಿಮಿಷದಲ್ಲೇ ಮುಳುಗಿದ ಐಷಾರಾಮಿ ಹಡಗು.

ಚೊಚ್ಚಲ ಪ್ರಯಾಣ ಆರಂಭಿಸಿದ ಕೆಲ ಕ್ಷಣಗಳಲ್ಲೇ 1 ಮಿಲಿಯನ್ ಡಾಲರ್ ಅಂದರೆ ಸುಮಾರು 8 ಕೋಟಿಗೂ ಅಧಿಕ ಮೌಲ್ಯದ ಐಷಾರಾಮಿ ವಿಹಾರಿ ಹಡಗೊಂದು ಮುಳುಗಿದಂತಹ ಆಘಾತಕಾರಿ ಘಟನೆ ಟರ್ಕಿಯಲ್ಲಿ ನಡೆದಿದೆ. ಡೋಲ್ಸ್ ವೆಂಟೊ ಹೆಸರಿನ ಈ ವಿಹಾರಿ ನೌಕೆಯು ಸರಿಸುಮಾರು 85 ಅಡಿ ಉದ್ದವಿತ್ತು.ಹಡಗಿನ ಒಟ್ಟು ಮೌಲ್ಯ ಅದರ ಬೆಲೆ ಸುಮಾರು $940,000 ಎಂದು ವರದಿಯಾಗಿದೆ. ಜೊಂಗುಲ್ಡಕ್ ಕರಾವಳಿಯ ನೀರಿನಲ್ಲಿ ಹಡಗು ನಿಧಾನವಾಗಿ ಮುಳುಗುತ್ತಿದ್ದಂತೆ, ಹಡಗಿ ಮಾಲೀಕ ಮತ್ತು ಇತರರು ಯಾವುದೇ ಹಾನಿಯಾಗದೆ ಕ್ರಮೇಣ ಈಜುತ್ತಾ ದಡ ಸೇರಿದ್ದಾರೆ. ಘಟನೆಗೆ ನಿಖರವಾದ ಕಾರಣ ಇನ್ನೂ ಬಹಿರಂಗವಾಗಿಲ್ಲ. ಡೋಲ್ಸ್ ವೆಂಟೊದ ತಾಂತ್ರಿಕ ತಪಾಸಣೆಯನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದು ಹಡಗುಕಟ್ಟೆ ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *