Breaking News

ಗೌರಿಬಿದನೂರು | ಪಿಂಚಣಿ ಹಣದ ವಿಚಾರಕ್ಕೆ ಜಗಳ: ಕೊಲೆಯಲ್ಲಿ ಅಂತ್ಯ.

ತಾಯಿಗೆ ಬರುತ್ತಿದ್ದ ಪಿಂಚಣಿ ಹಣ ಹಂಚಿಕೊಳ್ಳುವ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಮೇಳ್ಯ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹನುಮಂತರಾಯಪ್ಪನ ಪುತ್ರ ನರಸಿಂಹಮೂರ್ತಿ (40) ಕೊಲೆಯಾಗಿರುವ ವ್ಯಕ್ತಿ.ರಾಮಾಂಜಿ ಹಾಗೂ ಗಂಗಾಧರಪ್ಪ ಬಂಧಿತ ಆರೋಪಿಗಳು.ಹಲ್ಲೆಯಿಂದ ಅಸ್ವಸ್ಥಗೊಂಡಿದ್ದ ನರಸಿಂಹಮೂರ್ತಿ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ನರಸಿಂಹಮೂರ್ತಿ ಅವರ ಪತ್ನಿ ಮಹೇಶ್ವರಮ್ಮ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *