ಚಿನ್ನಸ್ವಾಮಿ ಸ್ಟೇಡಿಯಂ ಈಗ ಕ್ರಿಕೆಟ್‌ಗೆ ಮತ್ತೆ ಆತಿಥ್ಯ ನೀಡಲು ಸಜ್ಜಾಗಿದೆ. ಜೂನ್ 4 ರಂದು ನಡೆದ ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ನಡೆದ ಕಾಲ್ತುಳಿತದ ಬಳಿಕ ಈ ಮೈದಾನದಲ್ಲಿ ಯಾವುದೇ ಪಂದ್ಯಗಳು ನಡೆದಿರಲಿಲ್ಲ. ಆರ್‌ಸಿಬಿ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ವೇಳೆ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಆಯೋಜಿಸುವ ಕೆ.ತಿಮ್ಮಪ್ಪಯ್ ಮೆಮೋರಿಯಲ್ ಟ್ರೋಫಿ ಟೂರ್ನಿಗೆ ಚಿನ್ನಸ್ವಾಮಿ ಅಂಗಳ ಆತಿಥ್ಯ ನೀಡಲಿದೆ. ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ ಚಿನ್ನಸ್ವಾಮಿ ಕ್ರೀಡಾಂಗಣ ಆರು ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಈ ವೇಳೆ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಸಹ ಸೇರಿವೆ. ಟೂರ್ನಿ ಸೆಪ್ಟಂಬರ್ 26 ರಿಂದ ಆರಂಭವಾಗಲಿದೆ. ಇನ್ನು ಸುರಕ್ಷತೆಯ ಕಾರಣಕ್ಕಾಗಿ ಅಭಿಮಾನಿಗಳಿಗೆ ನಿಷೇಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

