ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಡಿಒಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ತಿಂಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ‘ಅತ್ಯುತ್ತಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ’ ಪ್ರಶಂಶಾ ಪತ್ರ ನೀಡಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಪ್ರಕಟಿಸಿದರು.’ಆಸಕ್ತಿಯಿಂದ ಕಾರ್ಯನಿರ್ವಹಿಸುವವರ ಸೇವೆ ಗುರುತಿಸಿ ಪ್ರಂಶಸಾ ಪತ್ರ ವಿತರಿಸಿದಲ್ಲಿ ಪಿಡಿಒಗಳ ಕಾರ್ಯಕ್ಷಮತೆ ಇನ್ನಷ್ಟು ಹೆಚ್ಚಲಿದೆ. ಅವರು ಇನ್ನೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಲು ಉತ್ತೇಜನ ನೀಡಿದಂತೆ ಆಗಲಿದೆ’ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

