Breaking News

ರಕ್ತ ಚಂದ್ರಗ್ರಹಣ: ಕರ್ನಾಟಕದ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಪೂಜಾ ವೇಳಾಪಟ್ಟಿ ಬದಲಾವಣೆ.

ಕರ್ನಾಟಕದಾದ್ಯಂತ ಭಾನುವಾರ ರಾತ್ರಿ ರಕ್ತ ಚಂದ್ರಗ್ರಹಣ ಗೋಚರಿಸುವ ಹಿನ್ನೆಲೆಯಲ್ಲಿ ಹಲವು ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ-ಪುನಸ್ಕಾರಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಹಾಗೂ ದೇವಾಲಯ ಬಂದ್ ಮಾಡುವ ಕ್ರಮ ಕೈಗೊಳ್ಳಲಾಗಿದೆ.ಕೆಲವು ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲಾಗುತ್ತದೆ.ಸೆಪ್ಟೆಂಬರ್ 7 ರಂದು ಸಂಭವಿಸುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ, ಗೋಕರ್ಣ, ಘಾಟಿ ಸುಬ್ರಹ್ಮಣ್ಯ, ಹುಲಿಗೆ, ಹೊರನಾಡು, ಕುಕ್ಕು ಸುಬ್ರಹ್ಮಣ್ಯ ಸೇರಿದಂತೆ ಹಲವು ದೇವಸ್ಥಾನಗಳ ಸೇವೆಯಲ್ಲಿ ಬದಲಾವಣೆಗಳಾಗಲಿವೆ. ಬೆಂಗಳೂರಿನ ಗವಿಗಂಗಾಧರ ದೇವಾಲಯವನ್ನು ಸಹ ಗ್ರಹಣದ ಸಮಯದಲ್ಲಿ ಮುಚ್ಚಲಾಗುವುದು ತಿರುಪತಿ ತಿರುಮಲ ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ದೇವಸ್ಥಾನಗಳು ಮುಚ್ಚಲ್ಪಡಲಿವೆ ಗ್ರಹಣದ ಅವಧಿಯಲ್ಲಿ ಪೂಜೆ ಮತ್ತು ಶುಭ ಕಾರ್ಯಗಳನ್ನು ನಿಷೇಧಿಸಲಾಗಿದೆ

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *