Breaking News

ವ್ಯಕ್ತಿಯೊಬ್ಬ ಗೂಡ್ಸ್ ಆಟೋ ಚಾಲಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ.

ವ್ಯಕ್ತಿಯೊಬ್ಬ ಗೂಡ್ಸ್ ಆಟೋ ಚಾಲಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದು, ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹಳೇ ದ್ವೇಷದಿಂದ ಈ ದಾಂದಲೆ ನಡೆದಿದೆ ಎನ್ನಲಾಗಿದೆ. ಈ ಎಲ್ಲಾ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.ಪ್ರತ್ಯಕ್ಷದರ್ಶಿಗಳ ಪ್ರಕಾರ, ಬೈಕ್ ಸವಾರ ರಸ್ತೆಯ ಮಧ್ಯದಲ್ಲಿ ಚಾಕುವಿನಿಂದ ಹಲ್ಲೆ ನಡೆಸಿದ್ದಲ್ಲದೆ, ಸರಕು ಸಾಗಣೆ ವಾಹನದ ವಿಂಡ್ ಷೀಲ್ಡ್ ಅನ್ನು ಪುಡಿಪುಡಿ ಮಾಡಿದ್ದಾನೆ. ಬೈಕ್ ಸವಾರ ತನ್ನ ಕೈಯಲ್ಲಿ ಮಾರಕಾಸ್ತ್ರ ಹಿಡಿದುಕೊಂಡು ಇನ್ನೊಬ್ಬ ಪ್ರಯಾಣಿಕನಿಗೆ ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ವೇಳೆ ಸ್ಥಳೀಯರು ಆತನನ್ನು ತಡೆಯಲು ಯತ್ನಿಸಿದಾಗ ಆತ ಬೈಕ್‌ ಹತ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *